ಭಾರತದಲ್ಲೇ ಹೊಸ ಇತಿಹಾಸ ಸೃಷ್ಟಿಸಿರುವ ಕನ್ನಡದ ಹೆಮ್ಮೆ ‘ಕಾಂತಾರ’ ಸಿನಿಮಾ ಇದೀಗ ಕಿರುತೆಯಲ್ಲಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ . ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಅತೀ ಹೆಚ್ಚು ರೇಟಿಂಗ್ ಗಳಿಸುವ ಮೂಲಕ ಸ್ಟಾರ್ ಸುವರ್ಣದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದ್ದು,
ಸ್ಟಾರ್ ಸುವರ್ಣ SD ಹಾಗೂ HD ಸೇರಿ ಬರೋಬ್ಬರಿ 15.8 TVR ಪಡೆದ ಸ್ಟಾರ್ ಸುವರ್ಣ ವಾಹಿನಿಯು 2ನೇ ಸ್ಥಾನಕ್ಕೆ ತಲುಪಿದೆ. ಕಾಂತಾರ ಸಿನಿಮಾ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುದರ ಬಗ್ಗೆ ಬಹಳಷ್ಟು ಪ್ರಚಾರವನ್ನು ಪಡೆದುಕೊಂಡಿತ್ತು. ಮಂಗಳೂರಿನ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಸ್ಯಾಂಡ್ ಆರ್ಟ್ ಕೂಡ ಮೂಡಿ ಬಂದಿತ್ತು. ಕಾಂತಾರ ಸಿನಿಮಾವನ್ನು ಟಿವಿಯಲ್ಲಿ ನೋಡೋದಕ್ಕೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದರು.
ಇದೀಗ ಕಾಂತಾರ ಸಿನಿಮಾ ಪ್ರಸಾರವಾಗಿದ್ದು ಕಿರುತೆರೆಯಲ್ಲಿ ಹೊಸ ಛಾಪನ್ನು ಮೂಡಿಸಿದೆ. ಕಾಂತಾರದ ಯಶಸ್ಸಿನ ಬೆನ್ನಲ್ಲೇ ನಿಮ್ಮ ಮನೆ ಮನೆಗೆ ” ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” ಧಾರಾವಾಹಿಯು ಸೋಮ-ಶನಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು, ಕಿರುತೆರೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಲು ಸಜ್ಜಾಗಿದೆ. ನಿರಂತರಾಗಿ ಹೊಸ ಕಾರ್ಯಕ್ರಮಗಳನ್ನು ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಗರಿಮೆ ಇನ್ನಷ್ಟು ಎತ್ತರಕ್ಕೆ ಸಾಗಲಿ ಎಂಬುದು ನಮ್ಮ ಆಶಯ, ನಿಮ್ಮ ಪ್ರೀತಿ ಪ್ರೋತ್ಸಾಹ ಹೀಗೆ ಮುಂದುವರಿಯಲಿ.